ಪುತ್ತೂರು: ಸುದ್ದಿ ಮಾಹಿತಿ ಟ್ರಸ್ಟ್, ಏವಿಜಿ ಎಜುಕೇಶನಲ್ ಮತ್ತು ಚಾರೀಟೇಬಲ್ ಟ್ರಸ್ಟ್, ಸುದಾನ ರೆಸಿಡೆನ್ಶಿಯಲ್ ಸ್ಕೂಲ್ ಪುತ್ತೂರು ಸಹಯೋಗದಲ್ಲಿ ನಡೆಯಲಿರುವ ಶೈಕ್ಷಣಿಕ ಮೇಳ ಉದ್ಘಾಟನಾ ಕಾರ್ಯಕ್ರಮ ಸುದಾನ ರೆಸಿಡೆನ್ಶಿಯಲ್ ಸ್ಕೂಲ್‌ನ ಎಡ್ವರ್ಡ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ವಿಭಾಗ ಉಪ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ನಾಗೇಗೌಡ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಸುದ್ದಿ ಮಾಹಿತಿ ಟ್ರಸ್ಟ್ ಅಧ್ಯಕ್ಷ ಡಾ. ಯು ಪಿ ಶಿವಾನಂದ, ವಕೀಲರಾದ ಮಹೇಶ್ ಕಜೆ,ಮಧುರಾ ಎಜುಕೇಶನಲ್ ಟ್ರಸ್ಟ್ ಚೇರ್ ಮನ್ ಹನೀಫ್ ಮಧುರಾ, ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ, ಪುತ್ತೂರು ಎವಿಜಿ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎ.ವಿ ನಾರಾಯಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.