ಸವಣೂರು: ಎ.11ರಂದು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಟ್ರೆಡೀಷನಲ್ ಡೇ ಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್.ಎಲ್ ಶೆಟ್ಟಿಯವರು ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀ ಎಸ್ ರೈ ಹಾಗೂ ಉಪಪ್ರಾಂಶುಪಾಲ ಶೇಷಗಿರಿ ಎಂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗೂ ಕ್ರೀಡೆಗಳನ್ನು ಆಯೋಜಿಸಲಾಯಿತು.