ಬೆಟ್ಟಂಪಾಡಿ: ಇಲ್ಲಿನ ನವೋದಯ ಪ್ರೌಢಶಾಲೆಯ ಸಾಂಸ್ಕೃತಿಕ ಸಭಾಭವನದಲ್ಲಿ ಎ.10ರಂದು ನವೋದಯ ವಿದ್ಯಾಸಮಿತಿಯ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ ಇವರ ಅಧ್ಯಕ್ಷತೆಯಲ್ಲಿ ‘ನವಚೇತನ’ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ನವೋದಯ ವಿದ್ಯಾಸಮಿತಿಯ ಕಾರ್ಯದರ್ಶಿ ಚಂದ್ರಹಾಸ ಮೂರೂರು,ಇವರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದ. ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಚೂರಿಪದವು ಇಲ್ಲಿನ ಮುಖ್ಯಗುರು ಲಕ್ಷ್ಮೀ ಕೆ, ಹಾಗೂ ದ. ಕ. ಜಿ. ಪ. ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿನ ಮುಖ್ಯಗುರು ತಿ ಹೇಮಾ ಕೆ. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಪುಷ್ಪರಾಜ್ ಶೆಟ್ಟಿ, ನವೋದಯ ವಿದ್ಯಾ ಸಮಿತಿಯ ಕೋಶಾಧಿಕಾರಿ ಗಣೇಶ್ ಭಟ್ ಸುದೆನಡ್ಕ, ನಿಕಟ ಪೂರ್ವ ಕಾರ್ಯದರ್ಶಿ ಸಹಕಾರವನ ನಾರಾಯಣ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಗಣೇಶ ರೈ, ಉಪಾಧ್ಯಕ್ಷ ರಾಮಪ್ರಸಾದ್ ,ಗಣಿತ ಶಿಕ್ಷಕಿ ಗೌತಮಿ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹಶಿಕ್ಷಕಿ ಸುಮಂಗಲಾ ಕೆ ಸ್ವಾಗತಿಸಿದರು. ಮುಖ್ಯ ಗುರು ಪುಷ್ಪಾವತಿ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಸಹ ಶಿಕ್ಷಕಿಯಾದ ಶೋಭಾ ಬಿ ವಂದಿಸಿದರು. ಶಿಕ್ಷಕರಾದ ರಾಧಾಕೃಷ್ಣ ಕೋಡಿ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹ ಶಿಕ್ಷಕಿಯಾದ ಭುವನೇಶ್ವರಿ ಎಂ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ರಂಗ ತರಬೇತಿ, ಚಿತ್ರಕಲೆ ವಿಜ್ಞಾನ ನಾಟಕ, ಕೀಬೋರ್ಡ್, ಸಂಗೀತ,ನೃತ್ಯ ಹಾಡು, ಮುಂತಾದವುಗಳಲ್ಲಿ ವಿಶೇಷ ಸಾಧನೆ ಮಾಡಿರುವ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ, ಶಿಕ್ಷಕ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರಾರ್ಥಿಗಳಿಗೆ ಚಿತ್ರಕಲೆ ಮತ್ತು ರಂಗತರಬೇತಿಯನ್ನು, ವಿವಿಧ ಅಭಿನಯ, ಹಾಡು ಮುಂತಾದ ಹಲವಾರು ಚಟುವಟಿಕೆಗಳನ್ನು ನಡೆಸಿದರು .
ಶಿಬಿರದಲ್ಲಿ ಸುಮಾರು 70 ಕ್ಕೂ ಹೆಚ್ಚು ಮಕ್ಕಳು ಶಿಬಿರಾರ್ಥಿಗಳಾಗಿ ಭಾಗವಹಿಸಿದರು. ಶಾಲಾ ಸಿಬ್ಬಂದಿಗಳು, ಅಡುಗೆ ಸಹಾಯಕರು, ಪೋಷಕರು ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಹಕರಿಸಿದರು.