ಪುತ್ತೂರು: ಈಶ್ವರಮಂಗಲ ಶ್ರೀಕ್ಷೇತ್ರ ಹನುಮಗಿರಿಯಲ್ಲಿ ಎ.12ರಂದು ಹನುಮಜಯಂತಿಯಂದು ಹನುಮಗಿರಿ ಜಾತ್ರಯು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬೆಳಿಗ್ಗೆ ಶ್ರೀದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಧರ್ಮಶ್ರೀ ಪ್ರತಿಷ್ಠಾನದ ಮಹಾಪೋಷಕರಾದ ಮಹಾಬಲೇಶ್ವರ ಭಟ್ ಕೊನೆತೋಟ, ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಮ ಪಿ., ಶಿವರಾಮ ಶರ್ಮ, ರಘುರಾಜ ಕೆ.ಎಂ. ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
