
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದೆ. ಈ ವೇಳೆ ಕಾರಿನ ಒಳಗಡೆ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದೆ.
ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರು ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಮೂವರು ಯುವಕರಿದ್ದರು. ಯುವಕರು ಪುತ್ತೂರು ಮೂಲದವರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕೊಡಗು ಗ್ರಾಮಾಂತರ ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದು, ಆರೋಪಿಗಳಾದ ಫಜ್ಲುದ್ದೀನ್, ಮುಷ್ತಾಕ್, ಜಾಬಿರ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.