4ನೇ ತರಗತಿಯಿಂದ ಪ್ರಾರಂಭವಾಗಿ ಸದ್ಯ ಪಿಯುಸಿ ವ್ಯಾಸಂಗ ಪೂರೈಸಿರುವವರಿಗೆ ಇಲ್ಲಿದೆ ಸುವರ್ಣವಕಾಶ
ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ ಹಾಕಲು ಎರಡು ಹಂತಗಳಲ್ಲಿ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ
ಸ್ಪರ್ಧಾತ್ಮಕ ಪರೀಕ್ಷಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಬೇಸಿಗೆ ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವ ಅವಕಾಶಗಳ ಕುರಿತು ವಿಶೇಷ ತರಬೇತಿಗಳನ್ನು ಆಯೋಜಿಸಿದ್ದು ತರಬೇತಿಗಳು 2 ಹಂತದಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ 4ನೇ ತರಗತಿಯಿಂದ ಪ್ರಥಮ ಪಿಯುಸಿ ವ್ಯಾಸಂಗ ಮುಗಿಸಿರುವ ವಿದ್ಯಾರ್ಥಿಗಳಿಗೆ ನಡೆಯಲಿದ್ದು,ಎರಡನೇ ಹಂತದಲ್ಲಿ ಪ್ರಸ್ತುತ ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ತರಬೇತಿ ನಡೆಯಲಿದೆ.
ಮೊದಲ ಹಂತದ ತರಬೇತಿಯ ವಿಶೇಷತೆಗಳು
ಈ ಹಂತದ ತರಬೇತಿಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಾದ ನವೋದಯ, ಸೈನಿಕ್, ಮೊರಾರ್ಜಿ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆ, ಅಬಾಕಸ್, ಒಲಂಪಿಯಾಡ್, ಮಾನಸಿಕ ಸಾಮರ್ಥ್ಯ ಅಲ್ಲದೇ ಹಲವಾರು ವಿದ್ಯಾರ್ಥಿ ವೇತನ ಪರೀಕ್ಷೆಯ ತರಬೇತಿ ಸೇರಿದಂತೆ ಸರಕಾರಿ ನೇಮಕಾತಿಗಳಿಗೆ ಚಿಕ್ಕ ವಯಸ್ಸಿನಲ್ಲೇ ತರಬೇತಿ ನೀಡಿ, ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳ ಮೇಲೆ ವೈಯಕ್ತಿಕ ಗಮನಹರಿಸಿ ಅವರ ಕಲಿಕಾ ವಿಷಯಕ್ಕೆ ಸಂಬಂದಿಸಿದ ನ್ಯೂನತೆಗಳನ್ನು ಸರಿಪಡಿಸಲು ಬೇಕಾಗಿರುವ ಅಂಶಗಳ ಕುರಿತು ವಿಶೇಷ ಕೌನ್ಸ್ಲಿಂಗ್ ನಡೆಸಿ ಮುಂದಕ್ಕೆ ಅವರಿಗೆ ಇರುವ ಅವಕಾಶಗಳ ಮಾಹಿತಿ ನೀಡಿ ವೈಯಕ್ತಿಕ ಬೆಳವಣಿಗೆಯ ಮೇಲೆ ಗಮನ ಹರಿಸಲಾಗುತ್ತದೆ, ಅಲ್ಲದೇ ತರಬೇತಿ ಪಡೆಯುವ ಪ್ರತೀ ವಿದ್ಯಾರ್ಥಿಗೆ ಸ್ಪೋಕನ್ ಇಂಗ್ಲೀಷ್ ಹಾಗೂ ಕಂಪ್ಯೂಟರ್ ಶಿಕ್ಷಣವನ್ನು ಉಚಿತವಾಗಿ ವಿ. ಅಕಾಡೆಮಿಯು ನೀಡಲಿದೆ.

ಎರಡನೇ ಹಂತದ ತರಬೇತಿ
ಈ ಹಂತದ ತರಬೇತಿಯು ನೇರವಾಗಿ ಉದ್ಯೋಗ ಆಧರಿತ ತರಬೇತಿಯಾಗಿರಲಿದ್ದು, ಈಗಾಗಲೇ ದ್ವಿತೀಯ ಪಿ ಯು ಸಿ/ಪದವಿ ವಿದ್ಯಾಭ್ಯಾಸ ಮುಗಿಸಿರುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಕೌಶಲ್ಯ ಭರಿತ ತರಬೇತಿ ನೀಡುವುದರ ಜತೆಗೆ IAS/IPS/KAS ಬ್ಯಾಂಕಿಂಗ್, ರೈಲ್ವೆ ನೇಮಕಾತಿ ಸೇರಿದಂತೆ ಸರಕಾರಿ ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿ ನೀಡಲಾಗುತ್ತದೆ.
ಈ ತರಬೇತಿಯನ್ನು ಪಡೆಯುವ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ನೇಮಕಾತಿ, ಆರ್ಮಿ, ಪೊಲೀಸ್ ನೇಮಕಾತಿ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯು ಉಚಿತವಾಗಿರುತ್ತದೆ ಈ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳು ಕೂಡ ಸಂಪೂರ್ಣವಾಗಿ ಉಚಿತವಾಗಿರುತ್ತದೆ.
ಹಲವಾರು ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆದಿರುವ ವಿದ್ಯಾಮಾತಾ ಅಕಾಡೆಮಿಯ ಈ ಎಲ್ಲಾ ತರಬೇತಿಗಳನ್ನು ಪಡೆದು ರಜೆಯ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈ ಕೂಡಲೇ ವಿ. ಅಕಾಡೆಮಿಯನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ತರಗತಿಗಳು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ ಸಾಯಂಕಾಲ 3ರ ವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 96204 68869 / 9148935808
ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606