ಎ.15: ಉಪ್ಪಿನಂಗಡಿಯಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

0

ಉಪ್ಪಿನಂಗಡಿ: ಕೇಂದ್ರ ಸರಕಾರ ಜಾರಿಗೊಳಿಸಿರುವ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಅದನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಮತ್ತು ನೆಕ್ಕಿಲಾಡಿ ಉಮರುಲ್ ಫಾರೂಕ್ ಜುಮಾ ಮಸೀದಿ ಆಡಳಿತ ಸಮಿತಿ ನೇತೃತ್ವದಲ್ಲಿ ಎ.15ರಂದು ಉಪ್ಪಿನಂಗಡಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹಮ್ಮದ್ ಹಾಜಿ ನೆಕ್ಕಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿವಿಧ ಸಂಘಟನೆಗಳ ಮುಖಂಡರಾದ ಸುಧೀರ್ ಕುಮಾರ್ ಮರೋಳ್ಳಿ, ಮುನೀರ್ ಕಾಟಿಪಳ್ಳ, ಅನ್ವರ್ ಸಾದತ್ ಬಜತ್ತೂರು, ಇಸಾಕ್ ಪುತ್ತೂರು, ಅಬ್ದುಲ್ ರಶೀದ್ ಝೈನಿ, ಇಕ್ಬಾಲ್ ಬಾಳಿಲ ಮೊದಲಾದವರು ಭಾಗವಹಿಸಿಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here