ನೆಲ್ಯಾಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಮತ್ತು ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿಯಲ್ಲಿ ನಿರ್ಮಾಣಗೊಂಡ ನೆಲ್ಯಾಡಿ ಗ್ರಾಮ ಪಂಚಾಯತ್ನ ನೂತನ ಕಟ್ಟಡ ’ ಗ್ರಾಮ ಸೌಧ’ ಇದರ ಉದ್ಘಾಟನೆ ಎ.15ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ರೇಷ್ಮಾಶಶಿ, ಪಿಡಿಒ ಮೋಹನ್ಕುಮಾರ್ ಜಿ., ಲೆಕ್ಕ ಸಹಾಯಕ ಅಂಗು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ರಾಜ್ಯ ಆರೋಗ್ಯ ಸಚಿವರೂ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರೂ ಆದ ದಿನೇಶ್ ಗುಂಡೂರಾವ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ದ.ಕ.ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಸಭಾ ಸದಸ್ಯರಾದ ಡಾ| ಡಿ.ವೀರೇಂದ್ರ ಹೆಗ್ಗಡೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ.ಸೋಜ, ಕಿಶೋರ್ಕುಮಾರ್ ಪುತ್ತೂರು, ಡಾ.ಧನಂಜಯ ಸರ್ಜಿ, ಬಿ.ಎಲ್.ಭೋಜೇ ಗೌಡ, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್, ಕನ್ನಡ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಕಡಬ ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್., ಪಂಚ ಗ್ಯಾರಂಟಿ ಯೋಜನೆ ಕಡಬ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ಕುಮಾರ್ ಶೆಟ್ಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಪುತ್ತೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭರತ್ಕುಮಾರ್, ಕಡಬ ತಾ.ಪಂ.ಗ್ರಾಮೀಣ ಅಭಿವೃದ್ಧಿ ಸಹಾಯಕ ನಿರ್ದೇಶಕ ಸಂದೇಶ್ ಕೆ.ಎನ್.ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.