ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಎ. 15ರಂದು ನಡೆಯಲಿರುವ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಗ್ರಾಮ ಸೌಧ ಇದರ ಉದ್ಘಾಟನೆ ಕುರಿತ ಪೂರ್ವಭಾವಿ ಸಭೆ ಎ. 14 ರಂದು ಬೆಳಿಗ್ಗೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಮೋಹನ್ ಕುಮಾರ್ ಜಿ., ಅವರು ಅಂಬೇಡ್ಕರ್ ಅವರ ಕುರಿತು ಮಾತನಾಡಿದರು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಎ.15 ರಂದು ನಡೆಯುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆಯ ಸಿದ್ಧತೆ ಕುರಿತು ಚರ್ಚೆ ಮಾಡಲಾಯಿತು.
ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ಟಿ., ಸಲಹೆ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಷ್ಮಾ ಶಶಿ, ಸದಸ್ಯರಾದ ರವಿಪ್ರಸಾದ್ ಶೆಟ್ಟಿ , ಆನಂದ ಪಿಲವೂರು, ಉಷಾ ಜೋಯಿ, ಚೇತನಾ, ಮಹಮ್ಮದ್ ಇಕ್ಬಾಲ್, ಜಯಲಕ್ಷ್ಮೀ ಪ್ರಸಾದ್, ಪುಷ್ಪಾ, ಅಬ್ದುಲ್ ಜಬ್ಬಾರ್, ಜಯಂತಿ, ಪ್ರಕಾಶ ಕೆ., ಶ್ರೀಲತಾ ಸಿ.ಹೆಚ್., ಜಯಾನಂದ ಬಂಟ್ರಿಯಾಲ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಅಂಗು ಸ್ವಾಗತಿಸಿ, ವಂದಿಸಿದರು.