ಕಾಣಿಯೂರು ಶಾಲೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ

0

ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿಯ ಅಧ್ಯಕ್ಷ ಪರಮೇಶ್ವರ ಅನಿಲ ಅವರು ಅಧ್ಯಕ್ಷತೆ ವಹಿಸಿದ್ದರು.

ಸಂವಿಧಾನ ಪೀಠಿಕೆಯನ್ನು ಹೇಳುವುದರ ಮೂಲಕ ಸಂವಿಧಾನನಕ್ಕೆ ಗೌರವ ಸಲ್ಲಿಸಿ, ಅಂಬೇಡ್ಕರ್ ರವರ ಫೋಟೋಗೆ ಪುಷ್ಪಾರ್ಚಣೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಲಾಯಿತು.

ಶಾಲಾ ಶಿಕ್ಷಕಿ ಸುಜಯ ಅಂಬೇಡ್ಕರ್ ರವರ ಬಗ್ಗೆ ಆಶಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ, ಎಸ್ ಡಿ ಎಂ ಸಿ ಸದಸ್ಯರಾದ ಯಶಕಲಾ, ಬೆಳಿಯಪ್ಪ ಗೌಡ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಶ್ರೀ ಲಕ್ಷೀನರಸಿಂಹ ಭಜನಾ ಮಂಡಳಿಯ ಕೋಶಧಿಕಾರಿ ಲಕ್ಷ್ಮಣ ಗೌಡ ಮುಗರಂಜ, ಕಾಣಿಯೂರು ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಅಧ್ಯಾಪಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಬಾಲಕೃಷ್ಣ ಕೆ ಸ್ವಾಗತಿಸಿ, ಶಿಕ್ಷಕಿ ವೀಕ್ಷಿತಾ ವಂದಿಸಿದರು.

LEAVE A REPLY

Please enter your comment!
Please enter your name here