ಪುತ್ತೂರು: ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ವಹಿಸಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರು ಸುಮನ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಪ್ರಾರ್ಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ್ ಭಟ್ ಸ್ವಾಗತಿಸಿ ,ಪ್ರೌಢಶಾಲಾ ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿ ಧನ್ಯವಾದ ನೀಡಿದರು. ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರು, ಶಾಲೆಯ ಎಲ್ಲಾ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.