ಭಸ್ಮವಾದ ಕಾರು- ಪ್ರಯಾಣಿಕರು ಅಪಾಯದಿಂದ ಪಾರು

0

ಪುತ್ತುರು:ಕಾರೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಮಡಿಕೇರಿಯ ಸಿಂಕೋನ ಸಮೀಪದ ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಸಕಾಲದಲ್ಲಿ ಕೆಳಗಿಳಿದು ಪಾರಾಗಿದ್ದಾರೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹಿಡಿದ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಈ ಘಟನೆಯಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಗಮಸಿ ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here