ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು.
ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಅಧ್ಯಕ್ಷ ತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಅಂಬೇಡ್ಕರ್ ಜಯಂತಿಯ ಮಹತ್ವವನ್ನು ವಿವರಿಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಸವಿತಾ ಪಿ ಕಾರ್ಯಕ್ರಮ ನಿರೂಪಿಸಿದರು.