ಉಪ್ಪಿನಂಗಡಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉಪ್ಪಿನಂಗಡಿ ಗ್ರಾಮ ಪಂಚಾಯತ್ ವತಿಯಿಂದ ಎ.14ರಂದು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಸಿಬ್ಬಂದಿ ಮಹಾಲಿಂಗ ಕಜೆಕ್ಕಾರು ಮಾತನಾಡಿ ಅಂಬೇಡ್ಕರ್‌ರವರು ಸಂವಿಧಾನ ರಚಿಸಿದ ಬಗ್ಗೆ, ಅವರ ಆದರ್ಶ, ತತ್ವ, ಸಿದ್ಧಾಂತಗಳ ಗುಣಗಾನ ಮಾಡಿ ಅವರಲ್ಲಿರುವ ಒಂದಂಶವನ್ನಾದರೂ ನಾವುಗಳು ಅಳವಡಿಸಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು, ಸದಸ್ಯರಾದ ಯು.ಕೆ. ಇಬ್ರಾಹೀಂ, ಸಿಬ್ಬಂದಿಗಳಾದ ಆಶಾ, ಶ್ರೀನಿವಾಸ್, ಉಮೇಶ್, ಸ್ಥಳೀಯರಾದ ಭಾರತಿ ಕಜೆಕ್ಕಾರು ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ರಕ್ಷಿತ್ ವಂದಿಸಿದರು.