ಪುತ್ತೂರು : ಮಾರುತಿ ಸ್ವಿಫ್ಟ್ ಕಾರು ಮತ್ತು ಕಿಯಾ ಸೆಲ್ಟೋಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕುಂಬ್ರ ಜಂಕ್ಷನ್ ಸಮೀಪದ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಳಿ ನಡೆದಿದೆ.
ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಸೆಲ್ಟೋಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಎರಡು ಕಾರುಗಳಲ್ಲಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.