ಪುತ್ತೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕು ಘಟಕದ ವತಿಯಿಂದ ಸಮಕಾಲೀನ ಸಮಾಜದಲ್ಲಿ ಮಹಿಳಾ ಸಬಲೀಕರಣ ಹಕ್ಕುಗಳು, ಸುಧಾರಣೆಗಳು ಹಾಗೂ ವಾಸ್ತವಿಕತೆಗಳು ಎನ್ನುವ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಕಿರಣ್ ಚಂದ್ರ ರೈ ಅವರನ್ನು ಡಾಕ್ಟರೇಟ್ ಪದವಿಯನ್ನು ಪಡೆದುದಕ್ಕಾಗಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರು ಜ್ಞಾನದ ದಿಗಂತವನ್ನು ಹೆಚ್ಚಿಸಬೇಕು ಎನ್ನುವ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ರವರು ಹಿಂದಿನ ದಿನಗಳಲ್ಲಿ ಮಹಿಳೆ ನಾಲ್ಕು ಗೋಡೆಗಳ ಮಧ್ಯೆಗೆ ಸೀಮಿತವಾಗಿದ್ದು ಇವತ್ತು ಮಹಿಳೆ ಪುರುಷನಿಗೆ ಪ್ರತಿಸ್ಪರ್ಧಿಯಾಗಿ ನಿಂತಿದ್ದಾಳೆ ಎಂದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಭಾಷಿಣಿ ಮಾತನಾಡಿ,ಮಹಿಳೆಯರಾದ ನಾವು ಇವತ್ತಿನ ಜಗತ್ತು ಬಯಸುವಂತೆ ನಾವಿರೋಣ ಆದರೆ ನಮ್ಮ ಬುನಾದಿಯ ಬೇರನ್ನು ಮರೆಯದಿರೋಣ ಎಂಬುದಾಗಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜಲಕ್ಷೀ ಎಸ್ ರೈ ಯವರು ಸನ್ಮಾನಿತರ ಪ್ರಮಾಣ ಪತ್ರವನ್ನು ವಾಚಿಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್.ಶೆಟ್ಟಿ ಉಪಪ್ರಾಂಶುಪಾಲ ಶೇಷಗಿರಿ ಎಂ ,ಐ.ಕ್ಯೂ.ಎ.ಸಿ ಸಂಯೋಜಕ ಶಿವಪ್ರಸಾದ್ ಕೆ.ಆರ್ ಉಪಸ್ಥಿತರಿದ್ದರು.
ಪ್ರಥಮ ಬಿ.ಸಿ.ಎ ಪವಿತ್ರಾ ಸ್ವಾಗತಿಸಿ, ತೃತೀಯ ಬಿ.ಕಾಂ ಅಭೀಜ್ಞಾ ಪ್ರಾರ್ಥಿಸಿದರು.ದ್ವಿತೀಯ ಬಿ.ಕಾಂ ಸಝಾನ ವಂದಿಸಿದರು. ಸ್ವಾತಿ ತೃತೀಯ ಬಿ.ಎ ಸಂಪನ್ಮೂಲ ವ್ಯಕ್ತಿಗಳ ಪರಿಚಯಿಸಿದರು.ದ್ವಿತೀಯ ಬಿ.ಎ ಕಲ್ಪನಾ ಕಾರ್ಯಕ್ರಮ ನಿರ್ವಹಿಸಿದರು.