ನೆಲ್ಯಾಡಿ: ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗೋಳಿತ್ತೊಟ್ಟು ವಲಯ(ಗೋಳಿತ್ತೊಟ್ಟು, ನೆಲ್ಯಾಡಿ,ಪಟ್ಟೂರು) ಘಟ ಸಮಿತಿಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವ್ರತಪೂಜೆ ಎ.16ರಂದು ಗೋಳಿತ್ತೊಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ವೇ.ಮೂ.ಬ್ರಹ್ಮಶ್ರೀ ಚಂದ್ರಶೇಖರ ಉಪಾಧ್ಯಾಯ ಕುರೋಮೂಲೆ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಶ್ರೀ ಸತ್ಯದತ್ತ ವ್ರತಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ರಿಂದ ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ಮಂಗಳಾರತಿ ನಡೆಯಲಿದೆ.
ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ಪುಲಾರ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸುರೇಶ್ ರೈ, ಗೋಳಿತ್ತೊಟ್ಟು ಶಾಲಾ ಮುಖ್ಯಶಿಕ್ಷಕಿ ಜಯಂತಿ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಪಾಲೇರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪಿಡಬ್ಲ್ಯುಡಿ ಗುತ್ತಿಗೆದಾರ ಉಮ್ಮರ್ ಬೈಲಂಗಡಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ನೆಲ್ಯಾಡಿ ಘಟ ಸಮಿತಿ ಅಧ್ಯಕ್ಷ ಗಂಗಾಧರ ಶೆಟ್ಟಿ, ಪಟ್ಟೂರು ಘಟ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ, ಗೋಳಿತ್ತೊಟ್ಟು ಘಟ ಸಮಿತಿ ಅಧ್ಯಕ್ಷ ರವಿಚಂದ್ರ, ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷ ಅಶ್ರಫ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಾಟಿವೈದ್ಯೆಯರಾದ ಡೀಕಮ್ಮ ಅಲೆಕ್ಕಿ, ಧರ್ಣಮ್ಮ ಪೊಸೋಳಿಗೆ, ಕೊಕ್ಕಡ ಶ್ರೀದೇವಿ ಎಲೆಕ್ಟ್ರಿಕಲ್ಸ್ ಮತ್ತು ಹಾರ್ಡ್‌ವೇರ್‌ನ ವಸಂತ ರಾವ್‌ರವರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.