ಹಿರೆಬಂಡಾಡಿ: ಉಪ್ಪಿನಂಗಡಿ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಭಾರ ಕೃಷಿ ಅಧಿಕಾರಿಯಾಗಿದ್ದು ಮಾ.31ರಂದು ನಿವೃತ್ತರಾದ ಯನ್.ಭರಮಣ್ಣವರ ಅವರಿಗೆ ಬೀಳ್ಕೊಡುಗೆ ಸಮಾರಂಭ ಉಪ್ಪಿನಂಗಡಿ ರೈತ ಸಂಪರ್ಕ ಕೇಂದ್ರದಲ್ಲಿ ನಡೆಯಿತು.
ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷೆ ಲಲಿತ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮುಖಂಡ ಜಯಂತ ಪೊರೋಳಿ, ಉಪ್ಪಿನಂಗಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುನೀಲ್ ದಡ್ಡು, ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಕಿಂಡೋವು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿ ಅಡೆಕ್ಕಲ್, ಸದಸ್ಯರಾದ ಚಂದ್ರಾವತಿ ನೆಹರುತೋಟ, ಕೋಡಿಂಬಾಡಿ ಗ್ರಾ.ಪಂ.ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯ ಜಗನ್ನಾಥ ಶೆಟ್ಟಿ, ನಿವೃತ್ತ ಕೃಷಿ ಅಧಿಕಾರಿ ವಿಠಲ ರೈ, ನಿವೃತ್ತ ಬ್ಯಾಂಕ್ ಮೇನೇಜರ್ ಸೀತಾರಾಂ ಶೆಟ್ಟಿ ಹೆಗ್ಡೆಹಿತ್ಲು, ಸದಾಶಿವ ರೈ, ಉಪ್ಪಿನಂಗಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಸರೋಳಿ, ಪುತ್ತೂರು ಲ್ಯಾಂಪ್ಸ್ ಸೊಸೈಟಿ ನಿರ್ದೇಶಕ ಧರ್ಣಪ್ಪ ನಾಯ್ಕ್, ಚಂದ್ರಶೇಖರ ಮಾಳ, ಝಕಾರಿಯಾ ಅಡೆಕ್ಕಲ್, ಸುಲೈಮಾನ್ ಅಡೆಕ್ಕಲ್, ಹರಿಪ್ರಸಾದ್ ಬೊಳ್ಳಾವು, ಲಕ್ಷ್ಮಣ ನೆಡ್ಚಿಲ್, ಪ್ರವೀಣ್ ಕಜೆಕ್ಕಾರ್ ಸಹಿತ ಹಲವು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.
ಯನ್.ಭರಮಣ್ಣವರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೃಷಿ ಇಲಾಖೆಯ ಸಿಬ್ಬಂದಿ ಅಶ್ವಿನಿ ಪರಿಚಯ ಪತ್ರ ವಾಚಿಸಿದರು. ತಾಂತ್ರಿಕ ಸಹಾಯಕ ಸಿಬ್ಬಂದಿ ಸಾಯಿನಾಥ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಣ ವಂದಿಸಿದರು.