ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಂಚರಮಕ್ಕಿ ನಿವಾಸಿ ಸುರೇಶ ಕೆ.(44ವ.)ಎಂಬವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.14ರಂದು ಬೆಳಿಗ್ಗೆ ನಡೆದಿದೆ.
ಸುರೇಶ ಕೂಲಿ ಕೆಲಸ ಮಾಡಿಕೊಂಡಿದ್ದು, ಅಮಲು ಪದಾರ್ಥ ಸೇವನೆ ಮಾಡುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಎ.13ರ ರಾತ್ರಿ 10 ಗಂಟೆಯಿಂದ ಎ.14ರ ಬೆಳಿಗ್ಗೆ 6.30ರ ಮಧ್ಯೆ ಮನೆಯ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ ವರದಿಯಾಗಿದೆ. ಈ ಬಗ್ಗೆ ಮೃತರ ಪತ್ನಿ ಭವಾನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.