ಕಡಬ: ಕುಂತೂರುಪದವು-ರಾಮಡ್ಕದಲ್ಲಿ ನವೀಕೃತಗೊಂಡಿರುವ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಲೋಕಾರ್ಪಣಾ ಕಾರ್ಯಕ್ರಮ ಎ.18ರಂದು ನಡೆಯಲಿದೆ ಎಂದು ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮುಂಡಾಳ ಮತ್ರಾಡಿ, ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಡಾ.ಕುಮಾರ ಸುಬ್ರಹ್ಮಣ್ಯ ಭಟ್ ಕಂಡತ್ತಡ್ಕ, ಅಧ್ಯಕ್ಷ ಉದಯಶಂಕರ ಭಟ್ ಬಲ್ಲಾಳಿಕೆ, ಉತ್ಸವ ಸಮಿತಿ ಅಧ್ಯಕ್ಷ ಯತೀಶ ಕುಂಡಡ್ಕ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8ರಿಂದ ಭಜನಾ ಮಂದಿರದಲ್ಲಿ ಗಣಹೋಮ ನಡೆಯಲಿದೆ. 9.57ಕ್ಕೆ ಭಜನಾ ಮಂದಿರದ ಲೋಕಾರ್ಪಣೆ ನಡೆಯಲಿದ್ದು ಅದಿತಿ ಟ್ರಾನ್ಸ್‌ಪೋರ್ಟ್ ಮಾಲಕ ಸುರೇಶ್ ಕೆ.ಕುಂಡಡ್ಕರವರು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಆಹ್ವಾನಿತ ಭಜನಾ ತಂಡಗಳಿಂದ ಭಜನೆ ನಡೆಯಲಿದೆ. ಸಂಜೆ 5ರಿಂದ 6.30ರ ತನಕ ವಿವಿಧ ತಂಡಗಳಿಂದ ಏಕಕಾಲದಲ್ಲಿ ಸಾಮೂಹಿಕ ಕುಣಿತ ಭಜನೆ ನಡೆಯಲಿದೆ. ಸಂಜೆ 5 ರಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಂಜೆ 6.30ಕ್ಕೆ ಭಜನಾ ಮಂಗಳಾರತಿ ನಡೆಯಲಿದೆ. ರಾತ್ರಿ ಗಂಟೆ 7ಕ್ಕೆ ಪೂಜಾ ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 7.15ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 9.30ರಿಂದ ಅನ್ನಸಂತರ್ಪಣೆ ನಡೆಯಲಿದೆ. 9.30ರಿಂದ ಸಂಸಾರ ಕಲಾವಿದೆರ್ ಬಲ್ನಾಡು, ಪುತ್ತೂರು ಇವರು ಅಭಿನಯಿಸುವ ಮಾರ್ನೆಮಿ ’ಬದುಕೊಂಜಿ ಏಸ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.