ಕುಂತೂರು: ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಪದಗ್ರಹಣ ಮತ್ತು ವಿವಿಧ ಸಂಘಗಳ ಉದ್ಘಾಟನೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಫ್ರೌಢ ಶಾಲೆ, ರಾಮಕುಂಜ ಇಲ್ಲಿನ ಮುಖ್ಯೋಪಾಧ್ಯಾಯ ಸತೀಶ ಭಟ್, ಅವರು ದೀಪ ಬೆಳಗಿಸಿ ಪ್ರಸಕ್ತ ವರ್ಷದ ವಿದ್ಯಾರ್ಥಿ ಸಂಘ ಮತ್ತು ಸಂಘಗಳನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಜವಾಬ್ದಾರಿ ಮತ್ತು ಕರ್ತವ್ಯ ಪಾಲನೆಗಳ ಕುರಿತಂತೆ ಕೂಲಂಕುಷವಾಗಿ ಮಾತನಾಡುತ್ತಾ, ಶಿಕ್ಷಕ-ಒಬ್ಬ ನಾಯಕನಾಗಿ ಕರ್ತವ್ಯ ನಿರ್ವಹಿಸಬಹುದಾದ ವಿವಿಧ ಆಯಾಮಗಳು ಕುರಿತು ಪ್ರಸ್ತಾಪಿಸಿದರು ಮತ್ತು ವಿದ್ಯಾರ್ಥಿ ಶಿಕ್ಷಕರನ್ನು ಉತ್ತಮ ನಾಯಕರಾಗಲು ಕರೆ ನೀಡಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಉಷಾ ಎಂ ಎಲ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಸಂಘಗಳ ಕಾರ್ಯ ಪ್ರಾಮುಖ್ಯತೆಯ ಕುರಿತು ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕಿ ಉಮಾಶ್ರೀ ಪಿ.ಬಿ. ವಿವಿಧ ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ವಿವರ ನೀಡಿದರು.
ಸಹಾಯಕ ಪ್ರಾಧ್ಯಾಪಕರಾದ ವಿನ್ಸಿ ಅಬ್ರಹಾಂ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಸಂಯೋಜಕರಾದ ಹರೀಶ್ ಕುಮಾರ್ ಟಿ, ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ಕು| ಹಿತಾಶ್ರೀ ರೈ ಮತ್ತು ಕು| ಹರ್ಷಿತಾ ಎಲ್ ಡಿ, ಕಾರ್ಯಕ್ರಮ ನಿರೂಪಿಸಿದರು.