ಪುತ್ತೂರು ಜಾತ್ರೆ:ಇಂದು ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’

0

ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ.


ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.ಜಿಲ್ಲೆಯ ವಿವಿಧ ಠಾಣೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.ಜೊತೆಗೆ ಗೃಹರಕ್ಷಕದಳದವರೂ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಮಫ್ತಿಯಲ್ಲಿಯೂ ನೂರಾರು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.


ಬೆಳಿಗ್ಗೆ ಶ್ರೀ ದೇವಳದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ ಸಹಿತ ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದೆ.ರಾತ್ರಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಪ್ರದರ್ಶನ ನಡೆಯಲಿದೆ.ಈ ವರ್ಷ ದೇವಳದ ಭಂಡಾರದ ಬದಲು ಭಕ್ತರ ಸೇವೆಯ ಮೂಲಕ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.ಸೋನಿ ಎಂಬವರು ಸಿಡಿಮದ್ದು ಪ್ರದರ್ಶನ ನಡೆಸಿಕೊಡಲಿದ್ದಾರೆ.


ಹೆಚ್ಚುವರಿ ಬಸ್:
ವಿವಿಧ ಕಡೆಗಳಿಂದ ಜಾತ್ರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ವಿವಿಧ ಗ್ರಾಮಾಂತರ ಪ್ರದೇಶದಿಂದ ಹೆಚ್ಚುವರಿ ಬಸ್ಸುಗಳು ಹಾಗೂ ಇತರ ವಾಹನಗಳ ಓಡಾಟ ನಡೆಯಲಿದೆ.


ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್:
ಜಾತ್ರಾ ಗದ್ದೆಯಲ್ಲಿ ಹಲವು ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಮೊಬೈಲ್ ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ದೇವಳದ ರಥ ಮಂದಿರದ ಬಳಿ ನಿಲ್ಲಿಸಲಾಗಿದೆ.ಶೇಟ್ ಇಲೆಕ್ಟ್ರೋನಿಕ್ಸ್ ಸಂಸ್ಥೆ ಸಿಸಿ ಕ್ಯಾಮರಾಗಳ ನಿಯಂತ್ರಣ ಮಾಡಲಿದ್ದಾರೆ.ಇದು ಪೊಲೀಸರಿಗೂ ಅನುಕೂಲಕರವಾಗಲಿದೆ.


ಸುದ್ದಿಯಿಂದ ನೇರಪ್ರಸಾರ:
ಏ.17ರಂದು ಶ್ರೀ ದೇವರ ದರ್ಶನ ಬಲಿ ಉತ್ಸವ ಮತ್ತು ಬ್ರಹ್ಮರಥೋತ್ಸವವನ್ನು ಸುದ್ದಿ ನ್ಯೂಸ್ ಪುತ್ತೂರು ಯುಟ್ಯೂಬ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here