ಸವಣೂರು ವಿದ್ಯಾರಶ್ಮಿ ಪ್ರ.ದ. ಕಾಲೇಜಿನಲ್ಲಿ ಭಾರತ್ ಬೋಧ್ ಮಾಲಾ ಉಪನ್ಯಾಸ ಸರಣಿ ಕಾರ್ಯಕ್ರಮ

0

ಪುತ್ತೂರು: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ ಕರ್ನಾಟಕ ಮತ್ತು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಜಂಟಿ ಆಶ್ರಯದಲ್ಲಿ ಭಾರತ್ ಬೋಧ್ ಮಾಲಾ ಇದರ 10ನೇ ಉಪನ್ಯಾಸ ಸರಣಿ ಎ.16ರಂದು ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಇತಿಹಾಸ ಅಧ್ಯಯನದ ಮಹತ್ವವನ್ನು ತಿಳಿಸಿಕೊಟ್ಟರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ವಿವೇಕಾನಂದ ಪದವಿ ಕಾಲೇಜು (ಅಟೋನಮಸ್) ನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ .ಬಿ ಇವರು ಕಾಸರಗೋಡ್ ಜಿಲ್ಲೆಯಲ್ಲಿರುವ
ಕೋಟೆಗಳ ಬಗ್ಗೆ ವಿವರಣೆಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ರಾಜಲಕ್ಷ್ಮೀ ಎಸ್ ರೈ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥೆ ಪ್ರತಿಭಾ ಎಸ್ ಉಪಸ್ಥಿತರಿದ್ದರು.
ತೃತೀಯ ಬಿ.ಎ ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ, ದ್ವಿತೀಯ ಬಿ.ಎ ವಿದ್ಯಾರ್ಥಿ ಯಕ್ಷಿತ್ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ತೃತೀಯ ಬಿ.ಎ ವಿದ್ಯಾರ್ಥಿಯಾದ ಜಯಚಂದ್ರ ಮಾಡಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕಲ್ಪನಾ ನಿರ್ವಹಿಸಿದರು.
ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ಪವನ್ ಕುಮಾರ್ ಅವರ ದೇಶಭಕ್ತಿಗೀತೆಯೊಂದಿಗೆ ಆರಂಭಗೊಂಡಿತು.

LEAVE A REPLY

Please enter your comment!
Please enter your name here