ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಏಪ್ರಿಲ್ 17ರಂದು ನಡೆದ ಪ್ರಸ್ತುತ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆಯ ಅಸಿಸ್ಟೆಂಟ್ ಇಂಜಿನಿಯರಿಂಗ್ ಮ್ಯಾನೆಜರ್ ಆಗಿರುವ ಮಹೇಶ್ ಭಟ್ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಚ್ ಕೆ ಪ್ರಕಾಶ್ ಪ್ರಾಸ್ಥವಿಕ ಮಾತುಗಳನ್ನಾಡಿದರು. ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕಿ ರಜತ ಎಮ್ ಅತಿಥಿಗಳನ್ನು ಸ್ವಾಗತಿಸಿ, ವಂದಿಸಿ ನಿರೂಪಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.