ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಟರಾಜ ವೇದಿಕೆಯಲ್ಲಿ ಬುಧವಾರ ರಾತ್ರಿ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.
ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾ ಕೇಂದ್ರದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಡಾ. ರಾಜೇಶ್ ಬಿಜ್ಜಂಗಳ, ಸದಸ್ಯರಾದ ರಾಮ, ಮೌನೇಶ್ ವಿಶ್ವಕರ್ಮ ಕಲಾವಿದರನ್ನು ಗೌರವಿಸಿದರು.
