ಪುತ್ತೂರು: 33/11ಕೆ.ವಿ. ಮಾಡಾವು -ಬೆಳ್ಳಾರೆ ಮತ್ತು 33/11ಕೆ.ವಿ. ಮಾಡಾವು-ಗುತ್ತಿಗಾರು- ಸುಬ್ರಹ್ಮಣ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಎ.19 ರಂದು ಪೂರ್ವಾಹ್ನ 9.30 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಬೆಳ್ಳಾರೆ, ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 33/11ಕೆವಿ ಬೆಳ್ಳಾರೆ, ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.