ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಶೂಟೌಟ್

0

 

ಪುತ್ತೂರು: ದಿ| ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಧ್ಯರಾತ್ರಿ 1:30ರ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here