ಪುತ್ತೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಿನ್ನೆ (ಏ.18) ಮಧ್ಯರಾತ್ರಿ ಫೈರಿಂಗ್ ನಡೆದಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರಿಕ್ಕಿ ರೈ ಕಾರು ಚಾಲಕ ಬಸವರಾಜ್ ಅವರ ದೂರಿನಂತೆ ರಾಕೇಶ್ ಮಲ್ಲಿ, ಅನುರಾಧಾ, ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥನ್ ವಿರುದ್ಧ ಬಿಎನ್ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್ ದಾಖಲಾಗಿದೆ.
ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದು, ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.