ಪುತ್ತೂರು: ತಿಂಗಳಾಡಿ ಗಾಂಧಿನಗರದಲ್ಲಿರುವ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದ ಶ್ರೀ ಮಾರಿಪೂಜೆ ಮಹೋತ್ಸವವು ಎ.26 ರಿಂದ 28 ರವರೇಗೆ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದ್ದು ಮಾರಿಪೂಜೆ ಮಹೋತ್ಸವಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ಎ.19 ರಂದು ಬೆಳಿಗ್ಗೆ ನಡೆಯಿತು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಅಂಗಾರರವರು ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಮಾರಿಯಮ್ಮ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.