ಪುತ್ತೂರು: ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡ ಕೆ.ಎಂ. ಮುಸ್ತಾಫರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ, ಡಿಸಿಸಿ ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್ ಸಿಕ್ವೇರಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿ ಸ್ಟಾರ್, ಕಾರ್ಪೋರೇಟರ್ ರವೂಫ್ ಮೊದಲಾವರು ಉಪಸ್ಥಿತರಿದ್ದರು.