ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

0

ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಬನ್ನೆಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಧ್ಯಕ್ಷರಾಗಿ, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯಕ್ಕೆ ಸಂಬಂಧಿಸಿದ ಬನ್ನೆಂಗಳ ವಾಲೆಯ ಗುರಿಕಾರರಾಗಿ ಸೇವೆ ಸಲ್ಲಿಸಿದ್ದ ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿ ರೊನಾಲ್ಡ್ ಪಿಂಟೋ (58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಅವರ ಮೃತದೇಹವು ನಾಳೆ ಏ.21ರಂದು ಸೋಮವಾರ ಮಧ್ಯಾಹ್ನ 1.00 ಗಂಟೆಗೆ ಮೃತರ ಸ್ವಗೃಹ ಬನ್ನೆಂಗಳಕ್ಕೆ ಬರಲಿದ್ದು, ಮಧ್ಯಾಹ್ನ 3.00 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here