ಪುತ್ತೂರು: ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಲುವಾಗಿ ನಿತ್ಯ ಸಂಜೆ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದು, ಎ.20ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಈಶ್ವರ ಬೆಡೇಕರ್, ದಿನೇಶ್ ಪಿ.ವಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ಉದ್ಘಾಟಿಸಿದರು.
ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮದ ಸಂಚಾಲಕ ಡಾ| ರಾಜೇಶ್ ಬೆಜ್ಜಂಗಳ, ಬೆಟ್ಟಂಪಾಡಿ ಕಾಲೇಜಿನ ಗ್ರಂಥಪಾಲಕ ರಾಮ, ಪತ್ರಕರ್ತ ಮೌನೇಶ್ ವಿಶ್ವಕರ್ಮ, ಮಂಜುಳಾ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.