ಪುತ್ತೂರು:ಈಶ್ವರಮಂಗಲ ಹನುಮಗಿರಿ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.21ರಿಂದ ರಿಂದ 26 ರವರೆಗೆ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ಎ.21ರಂದು ನಡೆಯಿತು.
ಸಂಸ್ಥೆಯ ಸಂಚಾಲಕತ ಶಿವರಾಮ್ ಪಿ ಇವರ ಅಧ್ಯಕ್ಷತೆಯಲ್ಲಿ ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಲಾಯಿತು. ಸಂಸ್ಥೆಯ ಮುಖ್ಯ ಶಿಕ್ಷಕಿ ಸೌಮ್ಯ.ಎ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಬಿರದಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಶಿವರಾಮ್ ಪಿ ರವರು ಮಾತನಾಡಿ, ಪಠ್ಯಕ್ರಮ ಒಂದು ಭಾಗವಾದರೆ ನಮ್ಮ ಭೌತಿಕ, ಶಾರೀರಿಕ ವಿಚಾರಕ್ಕೂ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ಶಾರದಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯಾದ ಲತಾ ಡಿ ಕೆ ರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪ್ರಸೀದಾ ಮತ್ತು ರಾಜೇಶ್ವರಿ ನಿರೂಪಿಸಿದರು. ಶಿಕ್ಷಕಿಯರಾದ ಜಯಸ್ವಿನಿ ಸ್ವಾಗತಿಸಿ, ಗೀತಾ ವಂದಿಸಿದರು.