ವಿಟ್ಲ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾದ ಪಿಕಪ್ ವಾಹನ ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ- ಸಾಲೆತ್ತೂರು ರಸ್ತೆಯ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ನಡೆದಿದೆ.
ವಿಟ್ಲದಿಂದ ಸಾಲೆತ್ತೂರು ಮಾರ್ಗವಾಗಿ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನ ಹಿಂಭಾಗಕ್ಕೆ ರಾದುಕಟ್ಟೆ ಎಂಬಲ್ಲಿ ಹಿಂಭಾಗದಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಪಿಕಪ್ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತಕ್ಕೀಡಾದಾಗಿ ಬಸ್ಸಿನ ಪ್ರಯಾಣಿಕರು ಮತ್ತು ಪಿಕಪ್ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಎರಡು ವಿದ್ಯುತ್ ಕಂಬಗಳು ತುಂಡಾಗಿದೆ. ಪಿಕಪ್ ವಾಹನ ಭಾರೀ ಪ್ರಮಾಣದಲ್ಲಿ ಜಖಂಗೊಂಡಿದ್ದು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.