ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದಕ್ಕೆ ಹಾನಿಯಾದ ಘಟನೆ ಒಳಮೊಗ್ರು ಗ್ರಾಮದ ಬೊಳ್ಳಾಡಿಯಲ್ಲಿ ಎ.23ರಂದು ನಡೆದಿದೆ.
ಕಾಂಗ್ರೆಸ್ ಮುಖಂಡ ಮುಹಮ್ಮದ್ ಬೊಳ್ಳಾಡಿಯವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಮನೆಯ ವಯರಿಂಗ್ ಸುಟ್ಟು ಹೋಗಿದ್ದು ಮನೆಗೆ ಹಾನಿ ಸಂಭವಿಸಿದೆ. ಘಟನೆಯಿಂದ ಅಂದಾಜು 40 ಸಾವಿರ ರೂ ನಷ್ಟ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ವಿದ್ಯುತ್ ಸರಬರಾಜಿನಲ್ಲಿ ತಾಂತ್ರಿಕ ದೋಷ ಇರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಮುಹಮ್ಮದ್ ಬೊಳ್ಳಾಡಿ ಆರೋಪಿಸಿದ್ದು, ಮೆಸ್ಕಾಂ ಇಲಾಖೆಯ ವಿರುದ್ಧ ಶಾಸಕರಿಗೆ ಮತ್ತು ಮೇಲಾಧಿಕಾರಿಗಳಿಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.