ಪುತ್ತೂರು: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಿಂದ 28 ಮಂದಿ ಮೃತಪಟ್ಟು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ಈ ಕುರಿತು ಭಯೋತ್ಪಾದಕರ ವಿರುದ್ಧ ಭಾರತೀಯರ ಆಕ್ರೋಶ ಮುಗಿಲು ಮುಟ್ಟಿದ್ದು, ಎ.23ರಂದು ಪುತ್ತೂರಿನಲ್ಲಿ ಮಾತೃಭೂಮಿ ಸಂರಕ್ಷಣಾ ವೇದಿಕೆ, ವಿಶ್ವಹಿಂದು ಪರಿಷದ್ ಬಜರಂಗದಳ ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗು ವಿವಿಧ ಹಿಂದು ಸಂಘಟನೆಗಳ ನೇತೃತ್ವದಲ್ಲಿ ಪುತ್ತೂರು ದರ್ಬೆಯಿಂದ ಗಾಂಧಿಕಟ್ಟೆಗೆ ಪಾದಯಾತ್ರೆ ಆರಂಭಗೊಂಡಿದೆ.