ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಕೌಶಲ್ಯ ಪ್ರವರ್ತಕರಾಗಿ ಶಿಕ್ಷಕರು ಎಂಬ ವಿಷಯದ ಕುರಿತು ಪ್ರೇರಣಾ ಉಪನ್ಯಾಸ ಕಾರ್ಯಕ್ರಮವು ನಡೆಯಿತು.
ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸರ್ಕಾರಿ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ನಿವೃತ್ತ ಉಪನ್ಯಾಸಕ ಕ್ಸ್ವೇವಿಯರ್ ಡಿಸೋಜ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಉಷಾ ಎಂ ಎಲ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮದ ಸಂಯೋಜಕಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಪ್ರೀತಿಕ ಡಿ ಸ್ವಾಗತಿಸಿ, ವಿದ್ಯಾರ್ಥಿ ಸಂಘ ಅಧ್ಯಕ್ಷೆ ಕು| ಶಿಲ್ಪಾ ಕೆ. ಆರ್. ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ಕು| ವನ್ಯಶ್ರೀ ಮತ್ತು ಕು| ಆಯಿಷಾ ಕಾರ್ಯಕ್ರಮ ನಿರೂಪಿಸಿದರು.
