ಪುತ್ತೂರು: 2025 ಏ. 21ರಿಂದ 23 ರ ತನಕ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವೆಟರನ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ 44ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಸವಣೂರು ನಿವಾಸಿ ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆಯವರು 4*100 ಮತ್ತು 4*400 ಮೀ ರಿಲೇ ಓಟದಲ್ಲಿ 2 ಚಿನ್ನದ ಪದಕ , 200 ಹರ್ಡ್ಲ್ಸ್ ನಲ್ಲಿ ಬೆಳ್ಳಿ ಮತ್ತು ಜಾವಲಿನ್ ಎಸೆತದಲ್ಲಿ ಕಂಚಿನ ಪದಕಗಳನ್ನು ಗಳಿಸಿದ್ದಾರೆ. ಅಲ್ಲದೇ 2025 ಜುಲೈ 12 ಮತ್ತು 13 ಸಿಂಗಾಪುರದಲ್ಲಿ ಆಯೋಜಿಸಲ್ಪಡುವ ಅಂತರರಾಷ್ಟ್ರೀಯ ಮಾಸ್ಟರ್ಸ್ ಟ್ರ್ಯಾಕ್ ಮತ್ತು ಫೀಲ್ಡ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುವ ಅರ್ಹತೆಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಹಲವಾರು ವರ್ಷಗಳಿಂದ ಜಿಲ್ಲಾಮಟ್ಟ , ರಾಜ್ಯಮಟ್ಟ , ರಾಷ್ಟ್ರಮಟ್ಟದಲ್ಲಿ ಹಲವು ಪದಕಗಳನ್ನು ಗಳಿಸಿರುವುದು ಇವರ ಪರಿಶ್ರಮದ ಸಾಧನೆಗೆ ಕೈಗನ್ನಡಿಯಾಗಿದೆ .
Home ಇತ್ತೀಚಿನ ಸುದ್ದಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟ 2 ಸ್ವರ್ಣ, 1 ಬೆಳ್ಳಿ, 1 ಕಂಚಿನ ಪದಕದೊಂದಿಗೆ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ...