ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ, ಕಾಲೇಜು ವಾರ್ಷಿಕೋತ್ಸವ ಮತ್ತು ವಿಸ್ತೃತ ತರಗತಿ ಕಟ್ಟಡದ ಉದ್ಘಾಟನೆ ಎ.26ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಅಶೋಕ್ ಕುಮಾರ್ ರೈಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನರೇಂದ್ರ ರೈ ದೇರ್ಲ, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಭಾಗವಹಿಸಲಿದ್ದಾರೆ. ಈ ಸಂದರ್ಭ ಪ್ರಾಂಶುಪಾಲರಾದ ರವಿರಾಜ್ ಎಸ್. ಉಪಸ್ಥಿತಿಯಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Home ಕಾರ್ಯಕ್ರಮಗಳು ಎ.26: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ, ವಿಸ್ತೃತ ಕಟ್ಟಡದ ಉದ್ಘಾಟನೆ