ಕಾಣಿಯೂರು: ದ.ಕ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆಯು ಎ.26ರಂದು ನಡೆಯಲಿದ್ದು, ಸಹಕಾರ ಭಾರತೀ ಅಭ್ಯರ್ಥಿಗಳಾದ ಪುತ್ತೂರು ತಾಲೂಕಿನ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಎಸ್.ಬಿ. ಜಯರಾಮ ರೈ, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಕೆ. ಚಂದ್ರಶೇಖರ ರಾವ್, ಸುಳ್ಯ ತಾಲೂಕಿನ ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರ ಸಂಘದ ಭರತ್ ನೆಕ್ರಾಜೆ ಕಾಣಿಯೂರಿನಲ್ಲಿ ಅವರು ಎ.24ರಂದು ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಉದನಡ್ಕ, ಸದಸ್ಯರಾದ ತಾರಾನಾಥ ಕಾಯರ್ಗ, ಧನಂಜಯ ಕೇನಾಜೆ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಬೆಳಂದೂರು ಗ್ರಾ.ಪಂ. ಉಪಾಧ್ಯಕ್ಷ ಜಯಂತ ಅಬೀರ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ನಿರ್ದೇಶಕ ರಾಜೇಶ್ ಮೀಜೆ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವರಾಮ ದೋಳ್ಪಾಡಿ, ಮಾಧವ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.