ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ
ಪುತ್ತೂರು: ಇತಿಹಾಸ ಪ್ರಸಿದ್ಧ ಇರ್ದೆ-ಪಳ್ಳಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ ಎ.26ರಂದು ಇರ್ದೆ-ಪಳ್ಳಿತ್ತಡ್ಕ ದರ್ಗಾ ಶರೀಫ್ ವಠಾರದಲ್ಲಿ ನಡೆಯಲಿದೆ.
ಸಂಜೆ ಗಂಟೆ 5ಕ್ಕೆ ಕೊರಿಂಗಿಲ ಜುಮಾ ಮಸೀದಿ ಖತೀಬ್ ಜಿ.ಎಚ್ ಅಯ್ಯೂಬ್ ವಹಬಿ ನೇತೃತ್ವದಲ್ಲಿ ಮೌಲೂದ್ ಪಾರಾಯಣ ನಡೆಯಲಿದೆ.
ರಾತ್ರಿ ಗಂಟೆ 8ಕ್ಕೆ ಸೌಹಾರ್ದ ಸಂಗಮ ನಡೆಯಲಿದ್ದು ಕೊರಿಂಗಿಲ ಜುಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ಕುಂಞಿ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಯ್ಯಿದ್ ಹಾಶಿಂ ಬಾಅಲವಿ ತಂಙಳ್ ಕೊರಿಂಗಿಲ ಉದ್ಘಾಟಿಸಲಿದ್ದು ಕುಂಬ್ರ ಕೆಐಸಿ ಪ್ರಾಧ್ಯಾಪಕ ಅನೀಸ್ ಕೌಸರಿ ದಿಕ್ಸೂಚಿ ಭಾಷಣ ನಡೆಸಲಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ, ನ್ಯಾಯವಾದಿ ರಾಧಾಕೃಷ್ಣ ರೈ ಆನಾಜೆ, ಸಂಪ್ಯ ಪೊಲೀಸ್ ಠಾಣಾ ಎಸ್ಸೈ ಜಂಬೂರಾಜ್ ಮಹಾಜನ್, ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಪ್ರಗತಿಪರ ಕೃಷಿಕ ರಕ್ಷಣ್ ರೈ ಬಾಳೆಹಿತ್ಲು, ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾತ್ರಿ ಗಂಟೆ 9ಕ್ಕೆ ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು, ಅಸ್ಸಯ್ಯದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಎಚ್ ಅಯ್ಯೂಬ್ ವಹಬಿ ಉದ್ಘಾಟಿಸಲಿದ್ದು ಶಫೀಕ್ ಬದ್ರಿ ಬಾಖವಿ ಕಡಕ್ಕಲ್ ಅವರು ‘ಸ್ವರ್ಗಂ ಮಾಡಿ ವಿಲಿಕ್ಕುನ್ನು’ ಎನ್ನುವ ವಿಷಯದಲ್ಲಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
