*ವಾಣಿಜ್ಯ ವಿಭಾಗದ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರ್‍ಯಾಂಕ್ ಹಾಗೂ ತಾಲೂಕಿಗೆ ಪ್ರಥಮ
*ವಿಜ್ಞಾನ ವಿಭಾಗದ ಅನಘ ಡಿ. ಶೆಟ್ಟಿ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್‍ಯಾಂಕ್ ಹಾಗೂ ತಾಲೂಕಿಗೆ ಪ್ರಥಮ
*ವಿವೇಕಾನಂದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಾಣಿಜ್ಯ ವಿಭಾಗದ ಅನುಶ್ರೀ (ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪಿ. ಸತೀಶ್ ಮರಡಿತ್ತಾಯ ಹಾಗೂ ದೀಪಾ ದಂಪತಿಗಳ ಪುತ್ರಿ) 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರ್‍ಯಾಂಕ್ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅನಘ ಡಿ. ಶೆಟ್ಟಿ (ಪುತ್ತೂರು ತಾಲೂಕಿನ ನೆಹರು ನಗರದ ದಿನೇಶ್ ಶೆಟ್ಟಿ ಹಾಗೂ ಸವಿತಾ ಡಿ. ಶೆಟ್ಟಿ ದಂಪತಿಗಳ ಪುತ್ರಿ) 594, ಹಾಗೂ ಅಪರ್ಣ ಎ ಆಡಿಗ 593 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್‍ಯಾಂಕ್ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.