ಪುತ್ತೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಪರೀಕ್ಷಾ ಸಂದರ್ಭ ಪರೀಕ್ಷಾರ್ಥಿಯೋರ್ವರ ಜನಿವಾರ ತೆಗೆಸಿದ ಪ್ರಕರಣದ ಬಗ್ಗೆ ಪುತ್ತೂರು ತಾಲೂಕು ವಿಶ್ವಕರ್ಮ ಸಂಘ – ಸಂಸ್ಥೆಗಳು ಖಂಡನೆ ವ್ಯಕ್ತಪಡಿಸಿವೆ.
ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ. ಮಾತನಾಡಿ, ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಪರೀಕ್ಷಾ ಸಂದರ್ಭ ಪರೀಕ್ಷಾರ್ಥಿಯ ಜನಿವಾರವನ್ನು ತೆಗೆಸಿದ ಪ್ರಕರಣ ಖಂಡನೀಯ. ಸನಾತನ ಹಿಂದೂ ಪರಂಪರೆಯಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಖೇದಕರ ಎಂದರು.
ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣದ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
ವಿಶ್ವಕರ್ಮ ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ., ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಸುರೇಂದ್ರ ಆಚಾರ್ಯ, ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ, ತಾಲೂಕಿನ ವಿವಿಧ ವಿಶ್ವಕರ್ಮ ಸಂಘದ ಪದಾಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.