ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಕಳೆದ 13 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಆನಂದ ಗೌಡ(60ವ.)ಅವರು ಎ.25ರಂದು ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ.
ಮೂಲತ: ಕಡಬ ತಾಲೂಕಿನ ಆಲಂಕಾರು ನಿವಾಸಿಯಾಗಿದ್ದ ಆನಂದ ಗೌಡ ಅವರು ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಎಂಬಲ್ಲಿ ವಾಸವಾಗಿದ್ದರು. ಮೇ ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದರು. ಆನಂದ ಗೌಡರವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ಮಾಡುತ್ತಿದ್ದಂತೆ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ.