ಪುತ್ತೂರು:ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯನಿರತರಾಗಿದ್ದ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ವೈದ್ಯರಿಗೆ ಬೆಂಬಲ ಸೂಚಿಸಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಅವರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.
ಭೇಟಿ ನೀಡಿ ಮಾಹಿತಿ ಪಡೆದು ಮುಷ್ಕರಕ್ಕೆ ಬೆಂಬಲ ನೀಡುವುದಾಗಿ ಸೂಚಿಸಿದರು.
