
ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ
ಪುತ್ತೂರು: ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯರವರಿಗೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸಿಲ್ಲವೆಂದು ಆರೋಪಿಸಿ, ಪುತ್ತೂರಿನ ಆಸ್ಪತ್ರೆಗಳು ತುರ್ತು ಚಿಕಿತ್ಸೆ ಹೊರತು ಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಘಟನೆಯನ್ನು ಖಂಡಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.