ಪುತ್ತೂರು:ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಇದರ ಆಶ್ರಯದಲ್ಲಿ ಮರಾಟಿ ಯುವ ವೇದಿಕೆಯ ನೇತೃತ್ವದಲ್ಲಿ ಸ್ವಜಾತಿ ಬಾಂಧವರ 32 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮರಾಟಿ ಯುವ ಟ್ರೋಫಿ-2025 ಎ.27ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯಾಟವನ್ನು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ದುಗ್ಗಪ್ಪ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಲ್ಯಾಂಪ್ಸ್ ಸಹಕಾರಿ ಸಂಘದ ಅಧ್ಯಕ್ಷ ಪೂವಪ್ಪ ನಾಯ್ಕ ಕುಂಞಿಕುಮೇರು, ಮಹಮ್ಮಾಯಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶೀನ ನಾಯ್ಕ ಗಣೇಶನಗರ, ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಶೀನಪ್ಪ ನಾಯ್ಕ ನೆಲ್ಯಾಡಿ, ಕೋಶಾಧಿಕಾರಿ ಮೋಹನ ನಾಯ್ಕ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮರಾಟಿ ಯುವ ವೇದಿಕೆ ಅಧ್ಯಕ್ಷ ವಸಂತ ಆರ್ಯಾಪು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಬಹುಮಾನ ವಿತರಿಸಲಿದ್ದಾರೆ. ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪಂದ್ಯಾಟದಲ್ಲಿ ಪ್ರಥಮ ಬಹುಮಾನ ರೂ.15,555, ದ್ವಿತೀಯ ಬಹುಮಾನ ರೂ.7,777 ಹಾಗೂ ಟ್ರೋಫಿ ನೀಡಲಾಗುವುದು. ಅಲ್ಲದೆ ಪಂದ್ಯಶ್ರೇಷ್ಠ, ಸರಣಿ ಶ್ರೇಷ್ಠ, ಶಿಸ್ತಿನ ತಂಡ, ಅತ್ಯುತ್ತಮ ಬೌಲರ್ ಹಾಗೂ ಬ್ಯಾಟ್ಸ್‌ಮೆನ್ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮರಾಟಿ ಯುವ ವೇದಿಕೆಯ ಪ್ರಕಟಣೆ ತಿಳಿಸಿದೆ.