ಪುತ್ತೂರು: ಪುರಾತನ ಐತಿಹಾಸಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಥಮ ವರ್ಷದ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಎ.26ರಂದು ವಿವಿಧ ತಾಂತ್ರಿಕ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪಂಚಗವ್ಯ ಪುಣ್ಯಾಹವಾಚನ, ಮಹಾಗಣಪತಿ ಹೋಮ, ನಾಗ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ನಾಗ ತಂಬಿಲ, ಪಂಚವಿಂಶತಿ ಕಲಶಪೂಜೆ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸಂಜೆ ದುರ್ಗಾಪೂಜೆ, ರಂಗಪೂಜೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ದೇವಸ್ಯ, ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲು, ವ್ಯವಸ್ಥಾಪನಾ ಸಮಿತಿ ಸದಸ್ಯ ಸದಾನಂದ ಶೆಟ್ಟಿ ಕೂರೇಲು, ಪ್ರಜ್ವಲ್ ರೈ ತೊಟ್ಲ, ಜಗಜೀವನ್‌ದಾಸ್ ರೈ ಚಿಲ್ಮೆತ್ತಾರು, ಆಡಳಿತಾಧಿಕಾರಿ ಕೆ.ಟಿ ಗೋಪಾಲ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.