ನಾಳೆ (ಏ.27)ಕ್ಕೆ ವಿಶ್ವಕರ್ಮ ಸಭಾಭವನದಲ್ಲಿ ವಾಸ್ತುವಿನ ಬಗ್ಗೆ ಚಿಂತನ ಮಂಥನ -2025

0

ಪುತ್ತೂರು: ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ಇದರ ವತಿಯಿಂದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಅಶೀರ್ವಾದದೊಂದಿಗೆ ವಾಸ್ತುವಿನ ಬಗ್ಗೆ ಚಿಂತನ ಮಂಥನ -2025 ವಿಶೇಷ ಕಾರ್ಯಕ್ರಮ ಏ.27ರಂದು ಬೆಳಿಗ್ಗೆ ಗಂಟೆ 10 ರಿಂದ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.

ವಾಸ್ತು ತಜ್ಞ ಎನ್ ಹರಿಶ್ಚಂದ್ರ ಆಚಾರ್ಯ ನೆಟ್ಟಣಿಗೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿಯ ಪ್ರಧಾನಕಾರ್ಯದರ್ಶಿ ವೇ ಮೂ ಲೋಲಾಕ್ಷ ಶರ್ಮ ಮತ್ತು ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು ಅವರು ಘನ ಉಪಸ್ಥಿತಿಯಲ್ಲಿ ಇರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯುವಂತೆ ಸಂಘಟಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here