ಪುತ್ತೂರು: ಬನ್ನೂರು ಸಂತ ಅಂತೋನಿ ಧರ್ಮಕ್ಷೇತ್ರಕ್ಕೆ ಇದೀಗ ರಜತ ಸಂಭ್ರಮವಾಗಿದ್ದು ಎ.29ರಂದು ರಜತ ಸಂಭ್ರಮದ ಪ್ರಯುಕ್ತ ದಿವ್ಯ ಬಲಿಪೂಜೆ ಬಳಿಕ ಸಭಾ ಕಾರ್ಯಕ್ರಮ ಜರಗಲಿದೆ.
ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹಾರವರು ಸಂಜೆ ರಜತ ಸಂಭ್ರಮದ ದಿವ್ಯ ಬಲಿಪೂಜೆಯನ್ನು ನೆರವೇರಿಸಲಿರುವರು. ಬಳಿಕ ಚರ್ಚ್ ವಠಾರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹಾರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಭಾರತದ ಫ್ರಾನ್ಸಿಸ್ಕನ್ಸ್ ಸಭೆಯ ಪ್ರೊವಿನ್ಶಿಯಲ್ ವಂ|ಝೇವಿಯರ್ ದುರೈರಾಜ್‌ರವರು ಭಾಗವಹಿಸಲಿರುವರು. ಗೌರವ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಎಂಎಲ್‌ಸಿ ಐವಾನ್ ಡಿ’ಸೋಜ, ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಪುತ್ತೂರು ವಲಯದ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಬನ್ನೂರು ಸಂತ ಅಂತೋನಿ ಧರ್ಮಕ್ಷೇತ್ರದ ಮೊದಲ ಧರ್ಮಗುರು ವಂ|ಆಲ್ಫೋನ್ಸ್ ಮೊರಾಸ್(ಒಎಫ್‌ಎಂ), ಅನಿವಾಸಿ ಉದ್ಯಮಿ ಮೈಕಲ್ ಡಿ’ಸೋಜ, ಸ್ಥಳೀಯ ನಗರಸಭಾ ಸದಸ್ಯೆ ಶ್ರೀಮತಿ ಗೌರಿರವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಾಯೋಜಕರು ಹಾಗೂ ದಾನಿಗಳನ್ನು ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ತಜಾರ್ ಪಿಂಟೊ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜ, 21 ಆಯೋಗಗಳ ಸಂಚಾಲಕ ಜೆರಿ ಪಾಯಿಸ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.